ಮೇಧಾ ಪಾಟ್ಕ‌ರ್ ಅರೆಸ್ಟ್


ಮಾನಹಾನಿ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕ‌ರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 2000ರಲ್ಲಿ ನರ್ಮದಾ ಬಚಾವೋ ಆಂದೋಲನದ ವಿರುದ್ಧವಾಗಿ ಪ್ರಚಾರ ಮಾಡಿದ್ದರು ಎಂದು ಪ್ರಸ್ತುತ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿ.ಸಿ. ಸಕ್ಷೇನಾ ವಿರುದ್ಧ ಅವರು ಆರೋಪಿಸಿದ್ದರು. ಈ ಕಾರಣಕ್ಕೆ ಮೇಧಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಸುದೀರ್ಘ ತನಿಖೆಯ ನಂತರ ನ್ಯಾಯಾಲಯ ಮೇಧಾ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಇದೀಗ ಪೊಲೀಸರು ಅವರನ್ನು ಬಂಧಿಸಿದ್ದಾರೆ.



إرسال تعليق

0 تعليقات