ಮತ್ತೆ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ : ಸಿಎಂ


ರಾಜ್ಯದಲ್ಲಿ ಅಸಮಾನತೆ ನಿವಾರಿಸಲು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲು ನಿರ್ಧರಿಸಲಾಗಿದೆ. ಇದಕ್ಕೆ ಶಿಕ್ಷಕರ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 420 ಕೋಟಿ ರೂ. ವೆಚ್ಚದಲ್ಲಿ ಸಮೀಕ್ಷೆ ನಡೆಸುವ ಗುರಿ ಹೊಂದಲಾಗಿದೆ. ಸಹಾಯವಾಣಿ ಆರಂಭಿಸುತ್ತೇವೆ. ರಾಜ್ಯದ 2 ಕೋಟಿ ಕುಟುಂಬಗಳ ಮಾಹಿತಿ ಸಂಗ್ರಹಿಸುವ ಗುರಿ ಹೊಂದಿದ್ದೇವೆ ಎಂದು ಸಿಎಂ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಆಶಾ ಕಾರ್ಯಕರ್ತೆಯರು ಕೂಡ ಸಮೀಕ್ಷೆಯ ಭಾಗವಾಗಲಿದ್ದಾರೆ ಎಂದಿದ್ದಾರೆ.

Post a Comment

Previous Post Next Post

AD01